ಮಡಿಕೇರಿ, ಮಾ. 22: ತಾ. 21ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಂದರ್ಭ ಕಾಫಿ ಬೆಳೆಗಾರರ ಸಮಸ್ಯೆಗಳಾದ ಕಾಫಿ ಬೆಲೆ ಕುಸಿತ, ವಿದೇಶದಿಂದ ಕಾಳುಮೆಣಸು ಆಮದಾಗಿ ನಮ್ಮ ದೇಶದ ಕಾಳುಮೆಣಸಿನ ಬೆಲೆ ಕಡಿಮೆ ಯಾಗಿರುವದರ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸಿ, ಪರಿಹಾರ ದೊರಕಿಸಿ ಕೊಡುವಂತೆ ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಮನವಿ ಮಾಡಲಾಯಿತು. ಕಾಫಿ ಮತ್ತು ಕಾಳುಮೆಣಸಿಗೆ ಕನಿಷ್ಟ ಬೆಂಬಲ ಬೆಲೆ ನಿಗಧಿಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕೆಂದು ಮನವಿ ಮಾಡಲಾಯಿತು.

ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಜೈರಾಂ, ಕೋಮಾರ್ಕ್‍ನ ಮಾಜಿ ಅಧ್ಯಕ್ಷ ಡಿ.ಎಸ್.ರಘು, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್‍ನ ಅಧ್ಯಕ್ಷ ಹೆಚ್.ಕೆ. ಪ್ರಮೋದ್, ಮೂಡಿಗೆರೆ ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ, ಹಾಗೂ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಡಿ.ಎಂ. ವಿಜಯ್ ನಿಯೋಗ ಪಾಲ್ಗೊಂಡಿತ್ತು. ಪ್ರತಿಕ್ರಿಯಿಸಿದ ರಾಹುಲ್ ಗಾಂದಿ üಯವರು ಸಂಸತ್ತಿನಲ್ಲಿ ಪ್ರಸ್ತಾಪಿಸುವದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದರು.