ಮಡಿಕೇರಿ, ಮಾ.22: ದೇವರ ದಾಸಿಮಯ್ಯ ಅವರು ವಚನಕಾರಾಗಿ, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ದೇವರ ದಾಸಿಮಯ್ಯ ಜಯಂತ್ಯುತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜಕ್ಕೆ ಉತ್ತಮ ಸಂದೇಶಗಳನ್ನು ವಚನಗಳ ಮೂಲಕ ನೀಡಿದವರು. ಇವರ ವಚನಗಳು ಸಮಾಜದಲ್ಲಿ ಸಮಾನತೆ ಸಾರುತ್ತವೆ. ಇಂತಹ ವಚನಗಳನ್ನು ಅಧ್ಯಯನ ಮಾಡಿ ಮಹಾನ್ ವ್ಯಕ್ತಿಗಳು ನೀಡಿದಂತಹ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಬದುಕುವಲ್ಲಿ ಮುಂದಾಗಬೇಕು ಎಂದು ಸಚಿವರು ನುಡಿದರು. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇವರ ದಾಸಿಮಯ್ಯನವರು ಅಪ್ಪಟ ಶಿವಭಕ್ತರು. ಅವರ ತತ್ವ ನಿಷ್ಠೆ ಅನುಕರಣಿಯ ಎಂದು ಹೇಳಿದರು.
ವಚನಕಾರರಲ್ಲಿ ದೇವರ ದಾಸಿಮಯ್ಯ ಅವರು ಪ್ರಮುಖರಾಗಿ ವಚನಗಳ ಮೂಲಕ ಆಡುಭಾಷೆಯಲ್ಲಿ ಜನರಿಗೆ ಅರ್ಥೈಸುವಲ್ಲಿ ಹಾಗೂ ಸಮಾಜದಲ್ಲಿ ಸಮಾನತೆಯನ್ನು ತರಬೇಕು ಎಂಬ ಉದ್ದೇಶದಿಂದ ಜನರಲ್ಲಿ ಜಾಗೃತಿ ಮೂಡಿಸಿದರು. ವಚನ ಸಿದ್ಧಾಂತ ಮುಖಾಂತರ ಸಾಮಾಜಿಕ ಸುಧಾರಣೆ ಮಾಡುವಲ್ಲಿ ಶ್ರಮಿಸಿದವರು. ಇವರ ವಚನಗಳ ಸಿದ್ಧಾಂತಗಳು ಪ್ರತಿಯೊಬ್ಬರೂ ತಿಳಿಯಬೇಕು ಎಂದರು.
ಕ.ಸಾ.ಪ. ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ ದೇವರ ದಾಸಿಮಯ್ಯ ಆದ್ಯ ವಚನಕಾರರಲ್ಲಿ ಒಬ್ಬರಾಗಿದ್ದು. ಸಮಾಜದ ಅಂಕುಡೊಂಕುಗಳನ್ನು ಸುಧಾರಣೆ ಮಾಡಲು ಶ್ರಮಿಸಿದ್ದಾರೆ ಎಂದರು.
ಹತ್ತನೆಯ ಶತಮಾನದಲ್ಲಿ ಸಮಾಜದ ನ್ಯೂನ್ಯತೆಗಳನ್ನು ಅರಿತು ವಚನಗಳ ಮುಖಾಂತರ ಜನಜಾಗೃತಿ ಮೂಡಿಸುವಲ್ಲಿ ಮೊದಲ ವಚನಗಾರರಾಗಿದ್ದವರು ಎಂದು ತಿಳಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೆಳ್ಯಪ್ಪ ಮಾತನಾಡಿ ದೇವರ ದಾಸಿಮಯ್ಯ ಅವರು ನೂರಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಅವರು ಆದ್ಯ ವಚನಕಾರರು ಎಂದು ತಿಳಿಸುತ್ತಾ ಗಂಡು, ಹೆಣ್ಣು ಇಬ್ಬರು ಸಮಾನರು ಎಂದು ಪ್ರತಿಪಾದಿಸಿದ್ದರು ಎಂದರು.
ನೇಕಾರರ ಸಂಘದ ಜಿಲ್ಲಾಧ್ಯಕ್ಷ ಟಿ.ಕೆ. ಪಾಂಡುರಂಗ ಮಾತನಾಡಿ ಶಿರಂಗಾಲದಲ್ಲಿನ ನೇಕಾರ ಘಟಕವನ್ನು ಪುನಶ್ಚೇತನ ಮಾಡುವಂತಾಗಬೇಕು ಎಂದು ಕೋರಿದರು.
ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ನಿರ್ದೇಶಕ ಡಿ.ಕೆ.ತಿಮ್ಮಪ್ಪ ಮಾತನಾಡಿ ನೇಕಾರ ಸಮುದಾಯದವರು ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.
ವಿಧಾನ ಪರಿಷತ್ ಸದಸೆÀ್ಯ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ಮಣಜೂರು ಮಂಜುನಾಥ್ ನಿರೂಪಿಸಿದರು. ಭಾರತೀ ರಮೇಶ್ ಮತ್ತು ತಂಡದವರು ನಾಡಗೀತೆ ಹಾಡಿದರು. ಬಿ.ಸಿ.ಎಂ.ಅಧಿಕಾರಿ ಕೆ.ವಿ.ಸುರೇಶ್ ವಂದಿಸಿದರು.