ಗೋಣಿಕೊಪ್ಪ ವರದಿ: ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವೀರಾಜ ಪೇಟೆ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಯೋಗದಲ್ಲಿ ಅಂಗನವಾಡಿ ನೌಕರರ ಸಂಘ ಹಾಗೂ ಸ್ತ್ರಿ ಶಕ್ತಿ ವಲಯ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಪೆÇನ್ನಂಪೇಟೆಯ ಮಹಿಳಾ ಸಮಾಜದಲ್ಲಿ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಈ ಸಂದರ್ಭ ವೀರಾಜಪೇಟೆ ತಾಲೂಕಿನ ಅತ್ಯುತ್ತಮ ಕಾರ್ಯಕರ್ತೆಯಾಗಿ ಇತ್ತೀಚೆಗೆ ಆಯ್ಕೆಯಾದ ನಾಣಚ್ಚಿಯ ಕಾರ್ಯಕರ್ತೆ ಚೇಂದಿರ ಕಾವೇರಮ್ಮ ಅವರನ್ನು ಸನ್ಮಾನಿಸಲಾಯಿತು.