ಮಡಿಕೇರಿ, ಮಾ.22: ಜಿಲ್ಲಾ ಪಂಚಾಯಿತಿ ವತಿಯಿಂದ ಖರೀದಿಸಿರುವ ಹೊಸ ಆಂಬ್ಯುಲೆನ್ಸ್ ಗಳನ್ನು ತುರ್ತು ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಗಳಾದ ಕುಟ್ಟ, ಶನಿವಾರಸಂತೆ ಮತ್ತು ನಾಪೋಕ್ಲು ಇಲ್ಲಿಗೆ ನೀಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಅವರು ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮವು ತಾ. 23 ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ತಿಳಿಸಿದ್ದಾರೆ.