ವೀರಾಜಪೇಟೆ, ಮಾ. 22: ಬಿಸ್ಮಿಲ್ಲಾ ಶಾವಲಿ ಮಕಾನ್ ಮುಖ್ಯಸ್ಥ ಎಸ್.ಎಚ್. ಮೈನುದ್ದೀನ್ ಅವರಿಗೆ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೆÉೀಠ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ರಾಜ್ಯ ವಕ್ಫ್ ಮಂಡಳಿಯಿಂದ ಬೇಲೂರಿನಲ್ಲಿ ಆಯೋಜಿಸಲಾಗಿದ್ದ ಚಿಕ್ಕಮಗಳೂರು, ಹಾಸನ, ಹಾಗೂ ಕೊಡಗು ಜಿಲ್ಲೆಯ ಮುತುವಲ್ಲಿಗಳ ಸಮ್ಮೇಳನದಲ್ಲಿ ವೀರಾಜಪೇಟೆ ಸುಣ್ಣದ ಬೀದಿಯ ಬಿಸ್ಮಿಲ್ಲಾ ಶಾವಲಿ ಮಕಾನ್‍ನ ವ್ಯವಸ್ಥಿತ ಆಡಳಿತ, ಪ್ರಗತಿ ಹಾಗೂ ಅಭಿವೃದ್ಧಿಗೆ ಕಾರಣರಾದ ಹಿನ್ನೆಲೆ ಮೈನುದ್ದೀನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೀರಾಜಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಅನೇಕ ವರ್ಷಗಳಿಂದ ಸದಸ್ಯರಾಗಿ ಉಪಾಧ್ಯಕ್ಷರಾಗಿ ಪ್ರಸ್ತುತ ಹಿರಿಯ ಸದಸ್ಯರಾಗಿ ಮೈನುದ್ದೀನ್ ಸೇವೆ ಸಲ್ಲಿಸುತ್ತಿದ್ದಾರೆ.