ಸೋಮವಾರಪೇಟೆ: ಕರ್ನಾಟಕ ರಕ್ಷಣಾ ವೇದಿಕೆಯ ಸೋಮವಾರಪೇಟೆ ತಾಲೂಕು ಮಹಿಳಾ ಘಟಕದ ವತಿಯಿಂದ ತಾ. 25 ರಂದು ಇಲ್ಲಿನ ಮಹಿಳಾ ಸಮಾಜದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರವೇ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಸುರೇಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾಲೂಕು ಘಟಕದಿಂದ ಪ್ರಥಮ ವರ್ಷದ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ರಮೇಶ್, ಸೇವಾ ಪ್ರತಿನಿಧಿ ಶೈಲಾ, ಜಾನಪದ ಪರಿಷತ್ ತಾಲೂಕು ಕಾರ್ಯದರ್ಶಿ ವಿಜಯ್ ಹಾನಗಲ್ ಅವರುಗಳು ಭಾಗವಹಿಸಲಿದ್ದಾರೆ ಎಂದು ರೂಪಾ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಪೊಲೀಸ್ ಠಾಣೆಯ ಅಪ್ಸಾನಾ ಬೇಗಂ, ಮಹಿಳಾ ಸಮಾಜದ ಅಧ್ಯಕ್ಷೆ ನಳಿನಿ ಗಣೇಶ್, ಸರ್ಕಾರಿ ಆಸ್ಪತ್ರೆಯ ಶುಶ್ರೂಷಕಿ ಮೀನಾಕ್ಷಿ, ಪ.ಪಂ. ಪೌರ ಕಾರ್ಮಿಕರಾದ ಕಾಳಮ್ಮ, ತಣ್ಣೀರುಹಳ್ಳದ ಅಂಗನವಾಡಿ ಕಾರ್ಯಕರ್ತೆ ಕುಸುಮ ಅವರುಗಳನ್ನು ಸನ್ಮಾನಿಸಲಾಗುವದು ಎಂದರು.
ಗೋಷ್ಠಿಯಲ್ಲಿ ಕರವೇ ಮಹಿಳಾ ಘಟಕದ ಉಪಾಧ್ಯಕ್ಷೆ ಪ್ರೇಮಾ ಯೋಗೇಶ್, ಕಾರ್ಯದರ್ಶಿ ವಾಣಿ ಜೀವನ್, ಸಾಹಿತ್ಯ ಘಟಕದ ಉಪಾಧ್ಯಕ್ಷೆ ಅನಿತಾ ಶುಭಾಕರ್, ಸದಸ್ಯೆ ಶೀಲಾ ವಿಜಯ್‍ಕುಮಾರ್ ಅವರುಗಳು ಉಪಸ್ಥಿತರಿದ್ದರು.