ಮಡಿಕೇರಿ, ಮಾ. 23: ಮಡಿಕೇರಿ 66/11ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರ ಹೋಗುವ ಗದ್ದಿಗೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸ ಬೇಕಾಗುವದರಿಂದ ತಾ. 24 ರಂದು (ಇಂದು) ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಮಹದೇವಪೇಟೆ, ಗೌಡ ಸಮಾಜ, ಗದ್ದಿಗೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಭಗವತಿ ನಗರ, ಸಂಪಿಗೆಕಟ್ಟೆ ಸÀುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಇಲಾಖೆ ಕೋರಿದೆ.