ಸೋಮವಾರಪೇಟೆ, ಮಾ. 23: ಮಡಿಕೇರಿ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿಯಾಗಿರುವ ಜೀವಿಜಯ ಅವರನ್ನು ಗೆಲ್ಲಿಸಲು ಈ ಬಾರಿ ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಜೆ.ಡಿ.ಎಸ್.ನ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್ ಹೇಳಿದರು.

ಇಲ್ಲಿನ ಮಹಿಳಾ ಸಮಾಜದಲ್ಲಿ ಏರ್ಪಡಿಸಲಾಗಿದ್ದ ಜೆ.ಡಿ.ಎಸ್. ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಕ್ಷದ ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಹೆಚ್.ಆರ್. ಸುರೇಶ್ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಜೆ.ಡಿ.ಎಸ್. ನಗರ ಘಟಕದ ಅಧ್ಯಕ್ಷ ಕಮಲ್ ವಹಿಸಿದ್ದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವ, ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್ ಗೌಡ, ಪ್ರಮುಖರಾದ ಸಂಜಯ್ ಜೀವಿಜಯ, ಎ.ಪಿ. ವೀರರಾಜು, ರಾಮಣ್ಣ, ಪ್ರವೀಣ್, ವಿಜಯ, ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭ ಅನ್ಯ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಹಲವರು ಸೇರ್ಪಡೆಗೊಂಡರು.