ಪೊನ್ನಂಪೇಟೆ, ಮಾ. 23: ಬೇಸಿಗೆ ಆರಂಭವಾಗುತ್ತಿದ್ದಂತೆ ಜಿಲ್ಲಾದ್ಯಂತ ಕುಡಿಯುವ ನೀರಿಗಾಗಿ ಸವiಸ್ಯೆ ಎದುರಾಗತೊಡಗಿದೆ. ವೀರಾಜಪೇಟೆ ತಾಲೂಕಿನ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಬಾಳೆಲೆ ಕ್ಷೇತ್ರದ ಜಿ.ಪಂ. ಸದಸ್ಯ ಬಿ.ಎನ್. ಪ್ರಥ್ಯು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ತಲೆದೂರುವ ಕುಡಿಯುವ ನೀರಿನ ಸಮಸ್ಯೆ ವೇಳೆ ಅಧಿಕಾರಿಗಳು ಮುಂಬರುವ ಚುನಾವಣೆಯ ಕಾರ್ಯಚಟುವಟಿಕೆಗಳ ನೆಪ ಹೇಳಿ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಚುನಾವಣೆಯ ಯಾವದೇ ಕೆಲಸಗಳಿದ್ದರೂ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಮೊದಲ ಆಧ್ಯತೆ ನೀಡಬೇಕು. ಈ ಕುರಿತು ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿ.ಇ.ಓ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.