ಕುಶಾಲನಗರ, ಮಾ. 23: ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸಲು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಲೇಜು ವಿದ್ಯಾರ್ಥಿ ಮುಖಂಡರು ಮನವಿ ಪತ್ರ ಸಲ್ಲಿಸಿದರು.ಕಾಲೇಜಿನ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಯೋಗಾಲಯ ಸೇರಿದಂತೆ ವಿವಿಧ ಸೌಕರ್ಯಗಳು ಇನ್ನೂ ದೊರಕಿಲ್ಲ. ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶನ ನೀಡುವಂತೆ ವಿದ್ಯಾರ್ಥಿಗಳು ಮನವಿ ನೀಡಿದರು. ತಕ್ಷಣ ಈ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿ ಗಳೊಂದಿಗೆ ಚರ್ಚಿಸಿ ಬಗೆಹರಿಸಲಾಗುವದು ಎಂದು ಸಚಿವರು ಭರವಸೆ ನೀಡಿದರು. ಕಾಲೇಜು ವಿದ್ಯಾರ್ಥಿ ಮುಖಂಡರಾದ ದರ್ಶನ್, ವೆಂಕಟೇಶ್, ಶ್ರೇಯಸ್, ಮಧು ಮತ್ತಿತರರು ಇದ್ದರು.