ಮಡಿಕೇರಿ, ಮಾ. 23: ಅಂತರ್ರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿವಾರಣಾ ದಿನದ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗ ಕೊಡವ ಲ್ಯಾಂಡ್ ಸ್ವಾಯತ್ತತೆ (ಅಟೋನಮಿ) ಕೇಂದ್ರಾಡಳಿತ ಪ್ರದೇಶ ಹಕ್ಕೊತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್‍ನಿಂದ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು.