ಮಾ. 23 : ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲನೆ ಮಾಡಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ತಮ್ಮ ತಮ್ಮ ಇಲಾಖೆಯಲ್ಲಿ ಅಧಿಕಾರಿಗಳು ಚುನಾವಣಾ ಆಯೋಗದ ನಿಯಮವನ್ನು ಪಾಲಿಸಬೇಕಿದ್ದು, ಅದರಂತೆ ನಡೆದುಕೊಳ್ಳಬೇಕಿದೆ ಎಂದು ನಿರ್ದೇಶನ ನೀಡಿದರು. ನಾನಾ ಇಲಾಖೆ ಅಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ಚುನಾವಣೆ ಕರ್ತವ್ಯ ಪಾಲನೆ ಮಾಡಬೇಕು. ಅಧಿಕಾರಿಗಳ ಕಾರ್ಯಶೈಲಿ ಮತ್ತು ಚಟುವಟಿಕೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಲವು ಗೊಂದಲಗಳು ಬರಬಹುದು. ಅಂತಹ ಸಂದರ್ಭದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಚುನಾವಣಾಧಿಕಾರಿ ಅವರು ಆದೇಶವನ್ನು ಚಾಚು ತಪ್ಪದೆ ಪಾಲಿಸುವಂತೆ ಅವರು ತಿಳಿಸಿದರು.
ಜಿ.ಪಂ. ಸಿ.ಇ.ಒ. ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ ಚುನಾವಣೆ ಸಂದರ್ಭದಲ್ಲಿ ತುಂಬಾ ಅತ್ಯಗತ್ಯವಾಗಿ ಆಗಬೇಕಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದ ಅನುಮತಿ ಪಡೆಯಬೇಕು. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಅವರಿಗೆ ವರದಿ ಸಲ್ಲಿಸಬೇಕಿದೆ ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್‍ಕುಮಾರ್ ಮಾತನಾಡಿ ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಆದ್ದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಕಾರ್ಯಶೈಲಿಯನ್ನು ಮಾರ್ಪಾಡು ಮಾಡಿಕೊಳ್ಳಬೇಕಿದೆ ಎಂದು ಮಾಹಿತಿಯಿತ್ತರು.
ನೀತಿ ಸಂಹಿತೆ ಜಾರಿಯಾದ ನಂತರ ಸರ್ಕಾರದ ಜಾಹೀರಾತುಗಳು, ಫಲಕಗಳನ್ನು ತೆಗೆಯಬೇಕು, ವಾಹನಗಳನ್ನು ಕಚೇರಿ ಉದ್ದೇಶಕ್ಕಾಗಿ ಅಥವಾ ಚುನಾವಣೆ
(ಮೊದಲ ಪುಟದಿಂದ) ಉದ್ದೇಶಕ್ಕಾಗಿ ಮಾತ್ರ ಬಳಸಬೇಕು, ಲೋಕೋಪಯೋಗಿ, ಅರಣ್ಯ, ಎ.ಪಿ.ಎಂ.ಸಿ. ಮತ್ತಿತರ ಸರ್ಕಾರಿ ಐ.ಬಿ.ಗಳನ್ನು ಕಾಯ್ದಿರಿಸಬೇಕು. ಯಾವದೇ ಕಾರಣಕ್ಕೂ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು.
ಕುಡಿಯುವ ನೀರು ಮತ್ತಿತರ ಬಗ್ಗೆ ದೂರುಗಳು ಬಂದ ಸಂದರ್ಭದಲ್ಲಿ ನಿಯಮಾನುಸಾರ ಕ್ರಮ ವಹಿಸಬೇಕು. ಲೋಕೋಪಯೋಗಿ, ಪಂಚಾಯತ್ ರಾಜ್ ಮತ್ತಿತರ ಇಲಾಖೆಗೆ ಸಂಬಂಧಿಸಿದಂತೆ ದೂರುಗಳು ಬರಬಹುದು. ಅಂತಹ ಸಂದರ್ಭದಲ್ಲಿ ಜಿಲ್ಲಾಡಳಿತ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎ. ರಾಮಪ್ಪ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಂದ, ಪೌರಾಯುಕ್ತೆ ಬಿ.ಶುಭ, ಜಿಲ್ಲಾ ಸರ್ಜನ್ ಡಾ. ಜಗದೀಶ್, ಜಿಲ್ಲಾ ಪಂಚಾಯತ್ ಕಾರ್ಯಪಾಲಕ ಇಂಜಿನಿಯರ್ ರಾಜ್‍ಕುಮಾರ್ ರೆಡ್ಡಿ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಪ್ರಭು, ಜಿಲ್ಲಾ ಖಜಾನಾಧಿಕಾರಿ, ಸತೀಶ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜಗನಾಥ್, ತೋಟಗಾರಿಕೆ ಉಪ ನಿರ್ದೇಶಕಿ ದೇವಕ್ಕಿ, ಪಶುಪಾಲನೆ ಹಿರಿಯ ಸಹಾಯಕ ನಿರ್ದೇಶಕ ದರ್ಶನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಎಂ. ಶಿವಕುಮಾರ್, ಲೋಕೋಪಯೋಗಿ ಇಲಾಖೆಯ ಎ.ಇ.ಇ. ಇಬ್ರಾಹಿಂ, ಮುದ್ರಾಂಕ ಇಲಾಖೆಯ ಜಿಲ್ಲಾ ಅಧಿಕಾರಿ ಸಿದ್ದೇಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಷಂಶುದ್ದೀನ್, ಚುನಾವಣಾ ಶಿರಾಸ್ತೇದಾರರಾದ ಪ್ರಕಾಶ್, ಅನಿಲ್ ಕುಮಾರ್ ಇತರರು ಇದ್ದರು.