ಮಡಿಕೇರಿ, ಮಾ. 24: ವೀರಾಜಪೇಟೆ ಪಟ್ಟಣ ಪಂಚಾಯಿತಿ ಹಾಗೂ ಕುಶಾಲನಗರ ಪಟ್ಟಣ ಪಂಚಾಯಿತಿಗೆ ಸರ್ಕಾರ ತಲಾ ಒಂದೊಂದು ಕೋಟಿ ಅನುದಾನ ಬಿಡುಗಡೆಗೊಳಿಸಿದೆ.ನಗರೋತ್ಥಾನ 3ನೇ ಹಂತದ ಯೋಜನೆಯಲ್ಲಿ ತೀವ್ರ ಮೂಲಭೂತ ಸೌಕರ್ಯದ ಕೊರತೆ ಎದುರಿಸುತ್ತಿರುವ ಕುಶಾಲನಗರ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ನಗರಾಭಿವೃದ್ಧಿ ಇಲಾಖೆಯಿಂದ ಈ ಅನುದಾನ ಬಿಡುಗಡೆಗೊಂಡಿದೆ ಎಂದು ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ತಿಳಿಸಿದ್ದಾರೆ.