ಮಡಿಕೇರಿ, ಮಾ. 24: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಭಣಿಸಿರುವದರಿಂದ ಮತ್ತು ಕೊಡಗು ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿವಾರಿಸುವ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮೇ 19ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ನದಿ ಹಾಗೂ ನದಿ ಮೂಲಗಳಿಂದ À ನೀರನ್ನು ಕುಡಿಯುವ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಯಾವದೇ ಉದ್ದೇಶಗಳಿಗೆ ಪಂಪ್ಸೆಟ್ ಅಥವಾ ಕಾಲುವೆ, ಕೊಳವೆಗಳ ಮುಖಾಂತರ ನೀರನ್ನು ಬಳಸುವದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.