ಸೋಮವಾರಪೇಟೆ,ಮಾ.24: ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ವತಿಯಿಂದ ಪ್ರಥಮ ವರ್ಷದ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ತಾ. 25ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಮಹಿಳಾ ಸಮಾಜದಲ್ಲಿ ನಡೆಯಲಿದೆ ಎಂದು ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಸುರೇಶ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಉದ್ಘಾಟಿಸಲಿದ್ದು, ವೇದಿಕೆಯ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ತಾಲೂಕು ಘಟಕದ ಅಧ್ಯಕ್ಷ ಕೆ.ಎನ್. ದೀಪಕ್, ಜಾನಪದ ಪರಿಷತ್‍ನ ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯ್ ಹಾನಗಲ್ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.