ಮಡಿಕೇರಿ, ಮಾ. 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸ್ತ್ರೀಶಕ್ತಿ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ತಾ. 26 ರಿಂದ 28 ರ ವರೆಗೆ ನಗರದ ಶಿಶು ಕಲ್ಯಾಣ ಸಂಸ್ಥೆ, ಸರ್ಕಾರಿ ಬಸ್ ನಿಲ್ದಾಣದ ಹತ್ತಿರ, ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಜಿಲ್ಲೆಯ ಸ್ತ್ರೀಶಕ್ತಿ ಗುಂಪುಗಳು, ಜಿಲ್ಲಾ, ತಾಲೂಕು ಒಕ್ಕೂಟಗಳು, ಸ್ವ ಸಹಾಯ ಸಂಘಗಳು ಹಾಗೂ ಉದ್ಯೋಗಿನಿ, ಸಮೃದ್ಧಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ಸ್ತ್ರೀಶಕ್ತಿ ಗುಂಪುಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.