ಗೋಣಿಕೊಪ್ಪ ವರದಿ, ಮಾ. 25: ಗೋಣಿಕೊಪ್ಪಲುವಿನ ಬೈಪಾಸ್ ರಸ್ತೆಯಲ್ಲಿರುವ ಖಾಲಿ ನಿವೇಶನ ಹಾಗೂ ಕೀರೆಹೊಳೆ ನಡುವೆ ಬೆಳೆದಿದ್ದ ಕುರುಚಲು ಕಾಡಿಗೆ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಆತಂಕ ಸೃಷ್ಟಿಯಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.