ಮಡಿಕೇರಿ, ಮಾ. 25: ಕೊಡವ ಸಮಾಜಗಳ ಒಕ್ಕೂಟದ ಸಭಾಂಗಣ ಹಾಗೂ ಮೈದಾನಕ್ಕೆ ತೆರಳುವ ರಸ್ತೆ ಕಾಮಗಾರಿಗೆ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಅವರು ರೂ. 20 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದು, ಅಗತ್ಯವಿದ್ದಲ್ಲಿ ಇನ್ನೂ ರೂ. 5 ಲಕ್ಷ ಬಿಡುಗಡೆ ಮಾಡುವದಾಗಿ ತಿಳಿಸಿದ್ದಾರೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹಾಗೂ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ತಿಳಿಸಿದ್ದಾರೆ.