ಸೋಮವಾರಪೇಟೆ, ಮಾ.25 : ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ತಾ. 26ರಂದು (ಇಂದು) ಸಂಜೆ 5 ಗಂಟೆಗೆ ಕೆಂಚಮ್ಮನ ಬಾಣೆಯ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್‍ಗೌಡ ತಿಳಿಸಿದ್ದಾರೆ.

ಸಮಾವೇಶದಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ, ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ, ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್. ಸುರೇಶ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.