ಸೋಮವಾರಪೇಟೆ, ಮಾ. 25: ಇಲ್ಲಿನ ಬಿ.ಟಿ. ಚೆನ್ನಯ್ಯ ಗೌರಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ತಾ. 26 ರಂದು (ಇಂದು) ಕಾಲೇಜಿನ ರಂಗ ಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ಎ. ಜೀವಿಜಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.