ಮಡಿಕೇರಿ, ಮಾ. 25: ಅಖಿಲ ಕೊಡವ ಸಮಾಜ ಹಾಗೂ ಮಡಿಕೇರಿ ಕೊಡವ ಸಮಾಜದ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 6 ರಂದು ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ 150ನೇ ಜನ್ಮ ದಿನೋತ್ಸವ ಕಾರ್ಯಕ್ರಮ ನಡೆಯಲಿದೆ. ಏ. 6 ರಂದು ಬೆಳಿಗ್ಗೆ 9.30ಕ್ಕೆ ನಗರದ ಕೊಡವ ಸಮಾಜದಲ್ಲಿ ಕಾರ್ಯಕ್ರಮ ಜರುಗಲಿದ್ದು, ಸಮಾಜದ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಎಂ. ಮೊಣ್ಣಪ್ಪ, ಹಿರಿಯ ಸಾಹಿತಿ ಬಾಚರಣಿಯಂಡ ಪಿ. ಅಪ್ಪಣ್ಣ ಅವರುಗಳು ಪಾಲ್ಗೊಳ್ಳಲಿದ್ದಾರೆ. ಜನರಲ್ ತಿಮ್ಮಯ್ಯ ಶಾಲಾ ಮಕ್ಕಳಿಂದ ಅಪ್ಪಚ್ಚ ಕವಿ ಕುರಿತ ನಾಟಕ, ಅಡ್ಡಂಡ ಸಿ. ಕಾರ್ಯಪ್ಪ ಅವರಿಂದ ಕವಿ ಕಾವ್ಯ ನಿರೂಪಣೆ ಜರುಗಲಿದೆ.