ಮಡಿಕೇರಿ, ಮಾ. 26 : ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರ, ಪ್ರಗತಿ ಸಾಧಿಸಲು ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯದೇವಿ ಗಲಗಲಿ ಅವರು ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಕಾರದಲ್ಲಿ ಸಮಾಜ ಕಲ್ಯಾಣ ಕಾರ್ಯಕ್ರಮಗಳ ಕುರಿತು ಶನಿವಾರ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರದ ಪ್ರತಿ ಇಲಾಖೆಯಲ್ಲಿಯೂ ಸಹ ಹಲವು ಕಾರ್ಯಕ್ರಮಗಳಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತಾ ಗಬೇಕು ಎಂದು ಅವರು ಹೇಳಿದರು. ಭಾರತ್ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಉಪಾಧ್ಯಕ್ಷ ಕೆ.ಟಿ.ಬೇಬಿಮ್ಯಾಥ್ಯು ಮಾತನಾಡಿ ಸರ್ಕಾರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರ್, ಪಶುವೈದ್ಯಕೀಯ, ಕೃಷಿ, ಪಾಲಿಟೆಕ್ನಿಕ್, ಕಾನೂನು ಪದವಿ, ಎಂ.ಬಿ.ಎ. ಉನ್ನತ ವ್ಯಾಸಂಗಕ್ಕೆ ಹಲವು ಸೌಲಭ್ಯ ಕಲ್ಪಿಸುತ್ತಿದೆ ಎಂದು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಬಾರ ಪ್ರಾಂಶುಪಾಲ ಮಹೇಶ್ ಮಾತನಾಡಿ, ಜನಾಂಗ ಮತ್ತು ಕುಟುಂಬ ಅಭಿವೃದ್ಧಿ ಹೊಂದಿದಲ್ಲಿ ಇಡೀ ಸಮಾಜ ಅಭಿವೃದ್ಧಿ ಕಾಣಬಹುದು ಎಂದು ಹೇಳಿದರು.

ಕಾಲೇಜಿನ ಪ್ರಾಧ್ಯಾಪಕರಾದ ಜವರಪ್ಪ, ಸರಸ್ವತಿ ಇತರರು ಇದ್ದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾವಿದ ರಾಜು ತಂಡದವರು ಹಾಡು ಹಾಡಿದರು.