ನಾಪೆÉÇೀಕ್ಲು, ಮಾ. 27: ಗ್ರಾಮೀಣ ಪ್ರದೇಶದ ಸಂಘ-ಸಂಸ್ಥೆಗಳು ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳನ್ನು ಹಮ್ಮಿಕೊಳ್ಳುವದರಿಂದ ಯುವ ಪೀಳಿಗೆ ಕ್ರೀಡೆಯಲ್ಲಿ ಮುಂದೆ ಬರಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಹೇಳಿದರು.

ನಾಪೆÇೀಕ್ಲು ಪ್ರಾಥಮಿಕ ಶಾಲಾ ಮೈದಾನದಲ್ಲಿ ನಾಪೆÇೀಕ್ಲು ಆಟೋ ಫ್ರೆಂಡ್ಸ್ ವತಿಯಿಂದ ತಾ. 24 ರಂದು ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಗು ಕ್ರೀಡೆಯ ತವರೂರು. ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಯನ್ನು ಗಳಿಸಿದ್ದಾರೆ. ಅದರಂತೆ ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳು ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತರಬೇಕೆಂದು ಹೇಳಿದರು.

ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ಮಾತನಾಡಿ, ನಾಪೆÉÇೀಕ್ಲು ಆಟೋ ಸಂಘ ಹಲವಾರು ಉತ್ತಮ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ರಕ್ತದಾನ ಮತ್ತು ಅನಾರೋಗ್ಯ ಪೀಡಿತರಿಗೆ ಸಹಾಯ, ಮತ್ತು ವಾರ್ಷಿಕವಾಗಿ ಅದ್ಧೂರಿ ಆಯುಧ ಪೂಜೆ, ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಜನಮನ್ನಣೆ ಗಳಿಸಿದೆ. ಮೊದಲ ಬಾರಿಗೆ ಇಂತಹ ಕ್ರೀಡೆಯನ್ನು ಆಯೋಜಿಸಿದ್ದು, ಈ ಕಾರ್ಯಕ್ರಮ ಯಾಶಸ್ವಿಯಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮೂವೆರ ವಿನು ಪೂಣಚ್ಚ ವಹಿದ್ದರು. ವೇದಿಕೆಯಲ್ಲಿ ಕಲಿಯಂಡ ಕೌಶಿಕ್, ಪೆÇಲೀಸ್ ಹೆಡ್‍ಕಾನ್ಸ್‍ಟೆಬಲ್ ಜಯರಾಮ್, ಕ್ರೀಡಾಕೂಟದ ಪದಾಧಿಕಾರಿಗಳು ಇದ್ದರು.