ನಾಪೆÇೀಕ್ಲು: ಮುಂದಿನ ಚುನಾವಣೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಧ್ಯಕ್ಷ ವೀರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ಅವರು ತಾ. 27ರಂದು ಕುಂದಚೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆಟ್ಟಿಮಾನಿಯ ಶಾಧಿಮಹಲ್‍ನಲ್ಲಿ ಏರ್ಪಡಿಸಲಾಗಿದ್ದ ವಲಯ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜೆಡಿಎಸ್ ಹಿರಿಯ ನಾಯಕ ಪಾಣತ್ತಲೆ ವಿಶ್ವನಾಥ್, ರಾಜ್ಯ ಕಾರ್ಯದರ್ಶಿ ಹೊಸೂರು ಸತೀಶ್ ಜೋಯಪ್ಪ, ವೀರಾಜಪೇಟೆ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಮತೀನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯ ಪ್ರಕಾಶ್ ಮತ್ತು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ವಲಯ ಅಧ್ಯಕ್ಷ ಮೋಹನ್ ಇದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಲೀಲಾವತಿ, ವಿ.ಎಸ್.ಎಸ್.ಎನ್ ಬ್ಯಾಂಕ್ ಸದಸ್ಯ ಅಯ್ಯಣೀರ ದಿನು ದೀನೇಶ್, ಮತ್ತಿತರ ನಾಯಕರು ಇದ್ದರು.ಕುಟ್ಟ: ಗಡಿ ಭಾಗ ಕುಟ್ಟದ ಪಟ್ಟಣದಲ್ಲಿ ತಾ. 27ರಂದು ಆಯೋಜನೆಗೊಂಡಿದ್ದ ಜೆಡಿಎಸ್‍ನ ಬಹಿರಂಗ ಸಭೆಯನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿದರು.

ಕೇರಳ ರಾಜ್ಯದ ವೈನಾಡು ಜಿಲ್ಲೆಯ ಜೆಡಿಎಸ್ ಉಪಾಧ್ಯಕ್ಷ ಹ್ಯಾರಿಸ್ ಮಾತನಾಡಿದರು.

ಕಾರ್ಮಿಕ ಘಟಕದ ಅಧ್ಯಕ್ಷ ಪರಮಾಲೆ ಗಣೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ಯುವ ಜೆಡಿಎಸ್‍ನ ಅಧ್ಯಕ್ಷ ಅಮ್ಮಂಡ ವಿವೇಕ್, ಕುಟ್ಟ ಭಾಗದ ಅಧ್ಯಕ್ಷ ಪಿ.ವಿ.ರೆನ್ನಿ, ಮುಖಂಡರಾದ ಮಲ್ಚೀರ ಅಪ್ಪಣ್ಣ, ಕೊಗೀಲವಾಡಿ ಕರಣ್ ಮುಂತಾದವರು ಹಾಜರಿದ್ದರು.ಇಲ್ಲಿನ ಮಹಿಳಾ ಸಮಾಜದಲ್ಲಿ ತಾ. 22ರಂದು ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್ ಪಾಲ್ಗೊಂಡು ಮಾತನಾಡಿದರು.

ಪಕ್ಷದ ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಎಚ್.ಆರ್. ಸುರೇಶ್ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಕಮಲ್ ವಹಿಸಿದ್ದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವ, ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್ ಗೌಡ, ಪ್ರಮುಖರಾದ ಸಂಜಯ್ ಜೀವಿಜಯ, ಎ.ಪಿ. ವೀರರಾಜು, ರಾಮಣ್ಣ, ಪ್ರವೀಣ್, ವಿಜಯ, ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಅನ್ಯ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಹಲವರು ಸೇರ್ಪಡೆಗೊಂಡರು.