ಮಡಿಕೇರಿ, ಮಾ. 28: ಕೊಡಗಿನ ಕಡಂಗದಲ್ಲಿ ಬದ್ರಿಯಾ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ನೂತನವಾಗಿ ನಿರ್ಮಿಸಿದ ಮಸೀದಿ ಉದ್ಘಾಟನೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

ತಾ. 29 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ, 11 ಗಂಟೆಗೆ ಕೊಕ್ಕಂಡಬಾಣೆ ದರ್ಗಾ ಝಿಯಾರತ್, 12 ಗಂಟೆಗೆ ಖಬರ್ ಝಿಯಾರತ್ ನಡೆಯಲಿದೆ. ಸಂಜೆ 4 ಗಂಟೆಗೆ ನಡೆಯುವ ಸ್ನೇಹ ಕೂಟ ಕಾರ್ಯಕ್ರಮದಲ್ಲಿ ಎಸ್.ಎಸ್.ಎಫ್. ರಾಷ್ಟ್ರೀಯ ಕಾರ್ಯದರ್ಶಿ ಕೆ.ಎಂ. ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ವಿಷಯ ಮಂಡಿಸಲಿದ್ದಾರೆ.

ಸಂಜೆ 7 ಗಂಟೆಗೆ ಸಾರ್ವಜನಿಕ ಮಹಾ ಸಮ್ಮೇಳನ ನಡೆಯಲಿದ್ದು, ಸಯ್ಯದ್ ಫಝಲ್ ಕೋಯಮ್ಮ ತಂಙಳ್ (ಕೂರತ್ ತಂಙಳ್) ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ. ಅಖಿಲ ಭಾರತ ಸುನ್ನೀ ಜಂಇಯ್ಯತ್ತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ, ನೇತಾರರು ಭಾಗವಹಿಸಲಿರುವರು.