ಕುಶಾಲನಗರ, ಮಾ 20: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಜತ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 9 ರಂದು ನಡೆಯಲಿದೆ ಎಂದು ಆಚರಣಾ ಸಮಿತಿ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 1980 ರಿಂದ ಇದುವರೆಗೆ ಸಂಸ್ಥೆಯಲ್ಲಿ ಸಾವಿರಾರು ಮಂದಿ ಶಿಕ್ಷಣ ಪಡೆದು ಹೊರ ತೆರಳಿದ್ದಾರೆ. ಆದಷ್ಟು ಮಂದಿಯ ಸಂಪರ್ಕಕ್ಕೆ ಶ್ರಮಿಸಲಾಗು ತ್ತಿದ್ದು ಮಾಹಿತಿ ದೊರೆತವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ವಿನಂತಿಸಿದರು. ರಜತ ಮಹೋತ್ಸವ ಸವಿನೆನಪಿಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ವಾಹನ ತಂಗುದಾಣ ನಿರ್ಮಿಸಲು ಉದ್ದೇಶಿಸಲಾಗಿದ್ದು ಆಸಕ್ತರು ಧನ ಸಹಾಯ ನೀಡಬಹುದು ಎಂದು ಅವರು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ 9740028456, 8105482889 ಸಂಪರ್ಕಿಸುವಂತೆ ಅವರು ಕೋರಿದರು.
ಬೆಳ್ಳಿಹಬ್ಬ ಆಚರಣಾ ಸಮಿತಿ ಅಧ್ಯಕ್ಷರಾದ ಚಿಲ್ಲನ ಗಣಿಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಂ.ಪಿ.ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಬೆಳ್ಳಿಹಬ್ಬ ಆಚರಣಾ ಸಮಿತಿ ಉಪಾಧ್ಯಕ್ಷರಾದ ಕೆ.ಜಿ.ಮನು, ಸಹ ಕಾರ್ಯದರ್ಶಿ ಡಿ.ಕೆ.ಸುಗುರಾಜ್, ಸಂಚಾಲಕರು ಗಳಾದ ನವನೀತ್ ಪೊನ್ನೇಟಿ, ಡಿ.ಎಸ್.ರಾಜೇಶ್, ಯು.ತಿಲಕ್, ಯೋಗೇಶ್, ಸಂಧ್ಯಾ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ್ ಇದ್ದರು.