ಮಡಿಕೇರಿ, ಮಾ. 28: ಮದೆ ಗ್ರಾ.ಪಂ.ನ 2017-18ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ವಹಿಸಲಾದ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯನ್ನು ತಾ. 31 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ನೋಡಲ್ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಮದೆ ವಿ.ಎಸ್.ಎಸ್.ಎನ್. ಬ್ಯಾಂಕ್ ಸಭಾಂಗಣದಲ್ಲಿ ನಡೆಸಲಾಗುವದು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮುದ್ಯನ ಚಂದ್ರಶೇಖರ್ ಹಾಗೂ ಲೆಕ್ಕ ಪರಿಶೋಧಕ ಪ್ರೀತಂ ಪೊನ್ನಪ್ಪ ಅವರು ಉಪಸ್ಥಿತರಿರುವರು