ಕುಶಾಲನಗರ, ಮಾ. 28: ಕುಶಾಲನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಎನ್‍ಎಸ್.ಎಸ್., ಯುವ ರೆಡ್ ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆ, ರಕ್ತನಿಧಿ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾಲೇಜು ಪ್ರಾಂಶುಪಾಲ ಡಾ. ವೆಂಕಟೇಶ್ ಬೆಮ್ಮತ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ಕರುಂಬಯ್ಯ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕಾಲೇಜು ರಿಜಿಸ್ಟ್ರಾರ್ ಲಿಂಗರಾಜು, ಎನ್‍ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರಸಾದ್ ಸಾಲ್ಯಾನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ತಾಲೂಕು ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ, ಡಾ. ಕೀರ್ತಿರಾಜು, ಜಿಲ್ಲಾ ಮೇಲ್ವಿಚಾರಕಿ ಸುನಿತಾ, ಸಿಬ್ಬಂದಿಗಳು ಇದ್ದರು. ಕಾಲೇಜಿನ 60ಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭ 29 ಬಾರಿ ರಕ್ತದಾನ ಮಾಡಿದ ದಾನಿ ವಿ.ಆರ್. ಮಂಜುನಾಥ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.