ಮಡಿಕೇರಿ, ಮಾ.28 : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಆಯೋಜಿಸಲಾಗಿರುವ ಚೆರಿಯಮನೆ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಗೌಡ ಕುಟುಂಬಗಳ ತಂಡದ ನೋಂದಾವಣಿಗೆ ತಾ. 28ರಂದು ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ಅಂತಿಮ ದಿನಾಂಕವನ್ನು ತಾ. 30ರ ಮಧ್ಯಾಹ್ನ 2 ಗಂಟೆವರೆಗೆ ವಿಸ್ತರಣೆ ಮಾಡಲಾಗಿದ್ದು, ಆಸಕ್ತ ತಂಡಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಯುವ ವೇದಿಕೆ ಕಾರ್ಯದರ್ಶಿ ಕಟ್ಟೆಮನೆ ರೋಶನ್ ತಿಳಿಸಿದ್ದಾರೆ