ಮಡಿಕೇರಿ, ಮಾ.28 : 208 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದ ಯಾವದೇ ದೂರುಗಳು ಇದ್ದಲ್ಲಿ, 208 ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಇವರನ್ನು ಸಂಪರ್ಕಿಸಬಹುದು ಎಂದು ಉಪ ವಿಭಾಗಾಧಿಕಾರಿ ತಿಳಿಸಿದ್ದಾರೆ.