ಕುಶಾಲನಗರ, ಮಾ. 28: ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣ ಸೇರಿದಂತೆ ಕೂಡಿಗೆ, ಕೂಡುಮಂಗಳೂರು ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್, ಪ್ರಚಾರ ಫಲಕಗಳನ್ನು ಅಧಿಕಾರಿಗಳು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ರಾಜ್ಯ ಸರಕಾರದ ಸಾಧನೆಗಳ ಬೋರ್ಡ್‍ಗಳು ಒಳಗೊಂಡಂತೆ ಪ್ರಚಾರ ಫಲಕಗಳನ್ನು ತೆರವುಗೊಳಿಸಿದರು. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಕಂದಾಯಾಧಿಕಾರಿ ಮಧುಸೂದನ್ ನೇತೃತ್ವದಲ್ಲಿ ಸಿಬ್ಬಂದಿಗಳು ಮುಂಜಾನೆಯಿಂದ ಸಂಜೆ ತನಕ ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡÀರು.