ಸೋಮವಾರಪೇಟೆ, ಮಾ. 28: ಹಾನಗಲ್ಲು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಗುಂಡಿಮಯವಾಗಿದ್ದು ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಸಿದ್ದಾರ್ಥ ಬಡಾವಣೆ ಅಧ್ಯಕ್ಷ ಹೆಚ್.ಕೆ. ಮಹೇಂದ್ರ ಎಚ್ಚರಿಸಿದ್ದಾರೆ.
ಗ್ರಾಮದ ಇತರ ರಸ್ತೆಗಳು ಅಭಿವೃದ್ಧಿಯಾಗುತ್ತಿದ್ದರೂ ಈ ಕಾಲೋನಿ ರಸ್ತೆ ಮಾತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇದನ್ನು ದುರಸ್ತಿಗೊಳಿಸಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುಂದಾಗದಿರುವದು ದುರಂತ ಎಂದು ಮಹೇಂದ್ರ ತಿಳಿಸಿದ್ದಾರೆ. ಮಳೆಗಾಲದಲ್ಲಿ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿ ನಡೆದಾಡಲೂ ಕಷ್ಟಕರವಾಗುತ್ತದೆ. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲೂ ಅಸಾಧ್ಯವಾಗಿದ್ದು, ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದ್ದಾರೆ.