ಮಡಿಕೇರಿ, ಮಾ. 28: ಏ. 1 ರಂದು ನಡೆದಾಡುವ ದೇವರು ಎಂಬ ಖ್ಯಾತಿಯ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 111ನೇ ಜನ್ಮದಿನೋತ್ಸವ ನಡೆಯಲಿದೆ. ಅಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಬೆಳಿಗ್ಗೆ 10.15ಕ್ಕೆ ಸೋಮವಾರಪೇಟೆ ಪಟ್ಟಣದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ, ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗುವದು ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ತಿಳಿಸಿದ್ದಾರೆ.