ಮಡಿಕೇರಿ, ಮಾ. 30: ಶನಿವಾರಸಂತೆ ಠಾಣಾ ವ್ಯಾಪ್ತಿಯ ದೊಡ್ಡ ಭಂಡಾರ ನಿವಾಸಿ ವೇಣುರಾಜ್ (45) ಎಂಬ ವ್ಯಕ್ತಿ ತಾ. 25ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದು, ಪ್ರಕರಣ ಸಂಬಂಧ ಮೊಕದ್ದಮೆ ದಾಖಲಾಗಿದೆ.