ಚೆಟ್ಟಳ್ಳಿ, ಮಾ. 30: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಡಿ.ಬಿ. ಕುಪ್ಪೆ ವನ್ಯಜೀವಿ ವಲಯದ ರಸ್ತೆಯಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು 6 ವರ್ಷದ ಹೆಣ್ಣು ಚಿರತೆ ಮರಣ ಹೊಂದಿತ್ತು.ಮಾನಂದವಾಡಿ ಮುಖ್ಯರಸ್ತೆಯಲ್ಲಿ ಪ್ರಯಾಣಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಧಿಕಾರಿಗಳು ಅಂತರಸಂತೆ ಚೆಕ್ ಪೋಸ್ಟ್‍ಗೆ ಮಾಹಿತಿ ರವಾನಿಸಿ ಅನುಮಾನಾಸ್ಪದ ಕಾರೊಂದನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಹುಣಸೂರು ವಿಭಾಗದ ವೈದ್ಯ ಮುಜೀಬ್ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಯಿತು.