ಪೊನ್ನಂಪೇಟೆ, ಮಾ. 30: ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಮಠದ ಹಿರಿಯ ಮಠಾಧೀಶರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 111ನೇ ಜನ್ಮದಿನಾಚರಣೆಯನ್ನು ಏ.1 ರಂದು ಗೋಣಿಕೊಪ್ಪಲು ಸಮೀಪದ ಧನುಗಾಲದಲ್ಲಿ ಆಚರಿಸಲಾಗುವದು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಎಸ್. ಸುರೇಶ್ ತಿಳಿಸಿದ್ದಾರೆ.

ವೀರಾಜಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ತು ಮತ್ತು ಧನುಗಾಲದ ಶ್ರೀ ಮುರುಡೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಅಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಮುರುಡೇಶ್ವರ ದೇವಸ್ಥಾನದ ಆವರಣದಲ್ಲಿ ಸ್ವಾಮೀಜಿಗಳ ಹುಟ್ಟುಹಬ್ಬಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 111ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.