ಮಡಿಕೇರಿ, ಮಾ. 30: ಪ್ರತಿ ವರ್ಷದಂತೆ ಈ ವರ್ಷವೂ ಏಪ್ರಿಲ್ 2 ರಂದು ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಟ್ರೋಫಿ ವಿತರಣೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಎಲ್ಲಾ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿವರ್ಗದವರನ್ನು ಮತ್ತು ಕುಟುಂಬ ಸದಸ್ಯರನ್ನು ಜಿಲ್ಲಾ ಪೊಲೀಸ್ ವತಿಯಿಂದ ಆಹ್ವಾನಿಸಲಾಗಿದೆ. ಕಾರ್ಯಕ್ರಮ ಬೆಳಿಗ್ಗೆ 8.30 ಗಂಟೆಗೆ ಜರುಗಲಿದೆ. ನಿವೃತ್ತ ಪೊಲೀಸ್ ಕುಟುಂಬಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ವಾಹನ ಸೌಲಭ್ಯ ಕಲ್ಪಿಸಿದ್ದು, ಈ ಅವಕಾಶ ಬಳಸಿಕೊಳ್ಳುವಂತೆ ಎಸ್.ಪಿ. ರಾಜೇಂದ್ರ ಪ್ರಸಾದ್ ಸಲಹೆ ನೀಡಿದ್ದಾರೆ.