ಸೋಮವಾರಪೇಟೆ, ಮಾ.30: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ, ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಗಿ ಹೊಂದಿರುವ ಬಂದೂಕುಗಳನ್ನು ಇಟ್ಟುಕೊಂಡಿರುವ ಮಾಲೀಕರು ಮುಂದಿನ 3 ದಿನಗಳ ಒಳಗೆ ತಮ್ಮ ಬಂದೂಕುಗಳನ್ನು ಠಾಣೆಯಲ್ಲಿ ಠೇವಣಿ ಇಡಬೇಕೆಂದು ಪೊಲೀಸ್ ಠಾಣಾಧಿಕಾರಿ ಎಂ. ಶಿವಣ್ಣ ಅವರು ಪತ್ರಿಕಾ ಪ್ರಕಟಣೆ ಮೂಲಕ ಸೂಚನೆ ನೀಡಿದ್ದಾರೆ.