ಶನಿವಾರಸಂತೆ, ಮಾ. 31: ಸಮೀಪದ ಹಂಡ್ಲಿ ಗ್ರಾಮದ ಹಂಡ್ಲಿ ಯುವಕ ಸಂಘದ ವತಿಯಿಂದ ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮದಿನದ ಅಂಗವಾಗಿ ತಾ. 8 ರಂದು ಸಂಜೆ ಶಾಲಾ ಮೈದಾನದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕವನ್ನು ಏರ್ಪಡಿಸಲಾಗಿದೆ.
ಅಂದು ಸಂಜೆ 5 ಗಂಟೆಗೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಊರುಮಠದ ಸಿದ್ಧಲಿಂಗ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ, ಕಲ್ಲಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ತೆಂಕಲಗೂಡು ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಶಿಡಿಗಳಲೆ ಮಠದ ಶಿವಲಿಂಗ ಸ್ವಾಮೀಜಿ, ಮನೆಹಳ್ಳಿ ಮಠದ ಮಹಾಂತಶಿವಲಿಂಗ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಅಭಿನವಸಿದ್ಧಲಿಂಗ ಸ್ವಾಮೀಜಿ, ವಿರಕ್ತಮಠದ ವಿಶ್ವೇಶ್ವರ ಸ್ವಾಮೀಜಿ ಹಾಗೂ ತೊರೆನೂರು ಮಠದ ಮಲ್ಲೇಶ ಸ್ವಾಮೀಜಿ ಆಶಿರ್ವಚನ ನೀಡಲಿದ್ದಾರೆ. ನಂತರ ದಾಸೋಹ ಕಾರ್ಯಕ್ರಮ ಹಾಗೂ ನಾಟಕ ಪ್ರದರ್ಶನಗೊಳ್ಳಲಿದೆ