ಗೋಣಿಕೊಪ್ಪ ವರದಿ, ಏ. 3 : ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ “ಕಾನನ ಕಲರವ-2018” ತಾ. 4 ರಂದು (ಇಂದು) ನಡೆಯಲಿದೆ.

ಉದ್ಘಾಟನೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಂ. ಕೆ. ನಾಯಕ್ ನೆರವೇರಿಸಲಿದ್ದು, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಸಚಿವ ಡಾ. ಪಿ. ನಾರಾಯಣಸ್ವಾಮಿ, ಡೀನ್ ಡಾ. ಬಿ. ಆರ್. ಗುರುಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿರುವ ವಿದ್ಯಾರ್ಥಿಗಳನ್ನು ಹಾಗೂ ಸಿಬ್ಬಂದಿಯವರನ್ನು ಸನ್ಮಾನಿಸಲಾ ಗುವದು ಎಂದು ಅರಣ್ಯ ಮಹಾವಿದ್ಯಾಲಯದ ಡೀನ್ ಸಿ. ಜೆ ಕುಶಾಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.