ಮಡಿಕೇರಿ, ಏ.3: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಚುನಾವಣಾ ಆಯೋಗದ ನಿರ್ದೇಶನದಂತೆ ಇದೇ ತಾ. 8 ರಂದು ಮಿಂಚಿನ ನೋಂದಣಿ ಹೆಸರಿನಲ್ಲಿ ವಿಶೇಷ ಆಂದೋಲನ ಕಾರ್ಯ ಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿ ಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದರು.

ಈ ದಿನದಂದು ಜಿಲ್ಲೆಯ 530 ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಜರಿದ್ದು, ಸೇರ್ಪಡೆಗೆ ಸಂಬಂಧಿಸಿದ ನಮೂನೆ-6ನ್ನು ಸ್ವೀಕರಿಸಲಿದ್ದಾರೆ. ಅಲ್ಲದೇ ಅದೇ ದಿನ ತಾಲ್ಲೂಕು ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿಯೂ ಸಹ ಅರ್ಜಿಗಳನ್ನು ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಕೊಳ್ಳುವದು ಎಂದು ತಮ್ಮ ಕಚೇರಿಯಲ್ಲಿ

(ಮೊದಲ ಪುಟದಿಂದ) ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಮತದಾರರ ಗುರುತಿನ ಚೀಟಿ ಇದ್ದರೆ ಸಾಲದು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಎಲ್ಲಾ ನಾಗರಿಕರು ತಮ್ಮ ಬೂತ್ ಮಟ್ಟದ ಅಧಿಕಾರಿಗಳನ್ನು, ತಾಲ್ಲೂಕು ಕಚೇರಿಯನ್ನು ಮತ್ತು ಉಪ ವಿಭಾಗಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಖಾತ್ರಿ ಪಡಿಸಿಕೊಳ್ಳುವದು. ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಟಿiಛಿ.iಟಿ ಹಾಗೂ ತಿತಿತಿ.ಞoಜಚಿgu.ಟಿiಛಿ.iಟಿ ವೆಬ್‍ಸೈಟ್‍ನಲ್ಲಿಯೂ ಸಹ ತಮ್ಮ ಹೆಸರುಗಳನ್ನು ಪರಿಶೀಲಿಸಿ ಖಾತರಿ ಪಡಿಸಿಕೊಳ್ಳುವದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರಲ್ಲದೆ, ಮತದಾರರು ತಮ್ಮ ಹೆಸರುಗಳನ್ನು ನೋಂದಣಿ ಮಾಡಲು ತಾ. 14 ಕೊನೆಯ ದಿನಾಂಕವಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.

ಹಣಕ್ಕೆ ದಾಖಲಾತಿ ಅಗತ್ಯ

ಮಾದರಿ ನೀತಿ ಸಂಹಿತೆಯು ಈಗಾಗಲೇ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಯಾವದೇ ವ್ಯಕ್ತಿಯು ರೂ.50 ಸಾವಿರ ಮೊತ್ತವನ್ನು ತೆಗೆದುಕೊಂಡು ತೆರಳಬಹುದು. ಆದರೆ ಪೂರಕ ದಾಖಲೆಯನ್ನು ಇಟ್ಟುಕೊಂಡಿರಬೇಕು. ತಪ್ಪಿದಲ್ಲಿ ತಪಾಸಣಾ ಅವಧಿಯಲ್ಲಿ ಮುಟ್ಟುಗೋಲು ಹಾಕಲಾಗುವದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರೂ.50 ಸಾವಿರಕ್ಕಿಂತ ಹೆಚ್ಚಿನ ಮೊತ್ತವನ್ನು ದಾಖಲೆಯೊಂದಿಗೆ ಇಟ್ಟುಕೊಂಡು ತೆರಳಿದ ಸಂದರ್ಭ ತಪಾಸಣಾ ಅವಧಿಯಲ್ಲಿ ಅನುಮಾನ ಕಂಡುಬಂದಲ್ಲಿ ಈ ಮೊತ್ತವನ್ನು ಮುಟ್ಟುಗೋಲು ಹಾಕಲಾಗುವದು ಎಂದು ಪಿ.ಐ.ಶ್ರೀವಿದ್ಯಾ ಅವರು ವಿವರಿಸಿದರು.

ವಾಹನಗಳಲ್ಲಿ ರೂ. 10 ಲಕ್ಷ ಕ್ಕಿಂತ ಹೆಚ್ಚು ನಗದು ಇರುವದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ, ಈ ಮೊತ್ತವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಲಾಗುವದು. ವಾಹನಗಳಲ್ಲಿ ಅನುಮಾನಸ್ಪದ ಸಾಮಗ್ರಿಗಳಾದ ಗೃಹ ಉಪಯೋಗಿ ವಸ್ತುಗಳು, ಮದ್ಯ, ಮಾದಕ ದ್ರವ್ಯಗಳು ಮತ್ತು ಆಯುಧಗಳನ್ನು ಸಾಗಿಸುವದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ ಈ ವಸ್ತುಗಳನ್ನು ಮುಟ್ಟುಗೊಲು ಹಾಕಲಾಗುವದು ಎಂದರು.

ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೊನರೆಡ್ಡಿ, ಸಹಾಯಕ ಚುನಾವಣಾಧಿಕಾರಿಗಳಾಗಿ ಎನ್.ಕೆ. ಶಾರಾದಾಂಭ ಮತ್ತು ವಿ.ಎನ್. ಬಾಡಕರ್ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಉಪ ನಿರ್ದೇಶಕ ಕೆ.ರಾಜು, ಸಹಾಯಕ ಚುನಾವಣಾಧಿಕಾರಿಗಳಾಗಿ ಆರ್.ಗೋವಿಂದ ರಾಜು ಮತ್ತು ಎನ್.ಕೆ.ಶಾರಾದಾಂಭ ಅವರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾದರಿ ನೀತಿ ಸಂಹಿತೆ ಬಗ್ಗೆ ದೂರು ಸ್ವೀಕರಿಸಲು 24ಘಿ7 ಚುನಾವಣಾ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದ್ದು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ದೂರುಗಳನ್ನು ನೀಡಬಹುದು, ದೂರವಾಣಿ ಸಂಖ್ಯೆಗಳು 08272-224300, 08272-222700, 08272-224900 ಮತ್ತು 08272-223700 ಹಾಗೆಯೇ ಮಾದರಿ ನೀತಿ ಸಂಹಿತೆ ಬಗ್ಗೆ ದೂರು ನೀಡಲು 8277365932 ದೂರವಾಣಿಗೆ ವ್ಯಾಟ್‍ಆಪ್ ಮೂಲಕ ಸಂದೇಶವನ್ನು ಕಳುಹಿಸಬಹುದಾಗಿದೆ.

ಮಾದರಿ ನೀತಿ ಸಂಹಿತೆ ಬಗ್ಗೆ ದೂರು ಸ್ವೀಕರಿಸಲು 24ಘಿ7 ಚುನಾವಣಾ ನಿಯಂತ್ರಣ ಕೊಠಡಿಯನ್ನು 208-ಮಡಿಕೇರಿ ಮತ್ತು 209- ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗಿದ್ದು, ಮಡಿಕೇರಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿಯವರ ಕಚೇರಿ 08272-225400 ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವೀರಾಜಪೇಟೆ ತಾಲೂಕು ಕಚೇರಿ 08274-256328 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.

ತಾ. 7 ರಂದು ಮ್ಯಾರಥಾನ್: ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾರರನ್ನು ಪ್ರೆರೇಪಿಸಲು ಮ್ಯಾರಥಾನ್ ಸ್ಫರ್ಧೆಯು ಇದೇ ತಾ. 7 ರಂದು ಬೆಳಗ್ಗೆ 9 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಗೊಳ್ಳಲಿದೆ ಎಂದು ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದರು. ಮ್ಯಾರಥಾನ್‍ನಲ್ಲಿ 19 ರಿಂದ 40 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು, 41 ರಿಂದ 60 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು ಹಾಗೂ 60 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು ಈ ಗುಂಪುಗಳಾಗಿ ವಿಂಗಡಿಸಲಾಗಿದೆ.

ಮ್ಯಾರಥಾನ್ ಸ್ಫರ್ಧೆಯಲ್ಲಿ ವಿಜೇತರಿಗೆ ವಯೋಮಾನವಾರು ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ವಿತರಿಸಲಾಗುವದು. ಆಸಕ್ತರು ಏಪ್ರಿಲ್ 6 ರೊಳಗೆ ತಮ್ಮ ಹೆಸರುಗಳನ್ನು ಬಾಲಕಿಯರ ಬಾಲಮಂದಿರ, ಕೋಟೆ ಆವರಣ (ಹಳೇ ಜೈಲು ಕಟ್ಟಡ), ಮಡಿಕೇರಿ (ದೂರವಾಣಿ: 08272 220126) ಇಲ್ಲಿ ನೋಂದಾಯಿಸಬಹುದಾಗಿದೆ ಎಂದು ಅವರು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ಇದ್ದರು.

ಮತಗಟ್ಟೆಗಳಿಗೆ ದೂರವಾಣಿ

ಜಿಲ್ಲೆಯ ಕೆಲವು ಕುಗ್ರಾಮಗಳಲ್ಲಿ ಯಾವದೇ ದೂರ ಸಂಪರ್ಕ ಇಲ್ಲದಿರುವದರಿಂದ ಮತಗಟ್ಟೆ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸಲು ತೊಂದರೆಯಾಗುತ್ತಿದೆ. ಆದ್ದರಿಂದ ದೂರಸಂಪರ್ಕ ಇಲ್ಲದಿರುವ ಕುಗ್ರಾಮಗಳಿಗೆ ದೂರವಾಣಿ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತ್ ಸಂಚಾರ ನಿಗಮದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಹೋಬಳಿ ಕುಮಾರಳ್ಳಿ ಕೊತ್ತನಳ್ಳಿ, ಬೆಟ್ಟದಳ್ಳಿ, ಕುಂದಳ್ಳಿ, ಹರಗ, ತೋಳೂರು ಶೆಟ್ಟಳ್ಳಿ, ಕೂತಿ, ನಿಲುಗುಂದ ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿ, ಕೂಡ್ಲೂರು, ನಿಲುಗಾವಲು, ದೊಡ್ಡಬಾಣಾವಾರ, ಹಂಡ್ಲಿ, ಯಡೂರು, ಕಿಬ್ಬೆಟ್ಟ, ಐಗೂರು, ಮಡಿಕೇರಿ ತಾಲ್ಲೂಕಿನ ಹಮ್ಮಿಯಾಲ, ಮುಟ್ಲು, ಮುಕ್ಕೋಡ್ಲು, ಕಾಲೂರು, ಕಡಮಕಲ್ಲು, ಪೆರಾಜೆ, ಮುಡ್ರೋಟ್, ಊರುಬೈಲು ಚೆಂಬು, ಹೆರವನಾಡು ಹೀಗೆ ನಾನಾ ಗ್ರಾಮಗಳಿಗೆ ದೂರವಾಣಿ ಸಂಪರ್ಕ ಇರುವದಿಲ್ಲ. ಇಂತಹ ಕಡೆಗಳಲ್ಲಿ ಸ್ಥಿರ ಅಥವಾ ಸಂಚಾರಿ ದೂರವಾಣಿ ಸಂಪರ್ಕ ಕಲ್ಪಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಕೆಲವು ಕಡೆಗಳಲ್ಲಿ ವೈಯರ್‍ಲೆಸ್ ಸೇವೆ ಕಲ್ಪಿಸಬೇಕಿದೆ ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ. ಡಿ.ಎಂ.ಸತೀಶ್ ಕುಮಾರ್ ಮಾತನಾಡಿ ಇರುವ ಟವರ್‍ಗಳನ್ನು ಬಲ ಪಡಿಸಬೇಕು, ಇಲ್ಲದಿದ್ದಲ್ಲಿ ಹೊಸ ಟವರ್‍ಗಳನ್ನು ಅಳವಡಿಸಿ ಸಂಪರ್ಕ ಕಲ್ಪಿಸಲು ಮುಂದಾಗಬೇಕಿದೆ ಎಂದರು. ಬಿ.ಎಸ್.ಎನ್.ಎಲ್ ಅಧಿಕಾರಿ ಸುಬ್ಬಯ್ಯ, ಏರ್‍ಟೆಲ್ ಹಾಗೂ ಜಿಯೋ ಕಂಪೆನಿಯ ಅಧಿಕಾರಿಗಳು ಇದ್ದರು.

ಚುನಾವಣಾ ನಿರ್ದೇಶನ ಪಾಲಿಸಿ

ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗದ ನಿರ್ದೇಶನವನ್ನು ಬ್ಯಾಂಕರ್ಸ್‍ಗಳು ಪಾಲಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚಿಸಿದರು. ಬ್ಯಾಂಕುಗಳ ವ್ಯವಸ್ಥಾಪಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕ್ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸಂಶಯ ಬಂದಲ್ಲಿ ಪರಿಶೀಲಿಸಬೇಕು. ದೊಡ್ಡ ಮೊತ್ತದ ಹಣ ಚಲಾವಣೆಗೆ ಸಂಬಂಧಿಸಿದಂತೆ ವರದಿ ನೀಡಬೇಕು. ಆದರೆ ಸಾರ್ವಜನಿಕರಿಗೆ ಯಾವದೇ ರೀತಿಯಲ್ಲಿ ತೊಂದರೆಯಾಗದಂತೆ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಬೇಕಿದೆ ಎಂದು ಅವರು ಹೇಳಿದರು. ಅಭ್ಯರ್ಥಿ ಹೆಸರಿನಲ್ಲಿ ಖಾತೆ ತೆರೆಯಬಹುದು ಅಥವಾ ಎಲೆಕ್ಷನ್ ಏಜೆಂಟರ್ ಮೂಲಕ ಖಾತೆ ತೆರೆಯಬಹುದಾಗಿದೆ ಎಂದು ಅವರು ಸಲಹೆ ಮಾಡಿದರು.

ರೂ. 1.23 ಲಕ್ಷ ನಗದು ವಶ

ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಆನೆಚೌಕೂರು ಚೆಕ್ ಪೋಸ್ಟ್ ಬಳಿ 1.23 ಲಕ್ಷ ರೂ ನಗದು ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಇದುವರೆಗೆ 16 ಲೀಟರ್ ಮದ್ಯ ವಶಪಡಿಸಿಕೊಂಡು ಎಫ್‍ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಚುನಾವಣೆ ಸಂಬಂಧ ಯಾರೂ ಸಹ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದರೆ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಲಾಗುವದು ಎಂದು ಅವರು ತಿಳಿಸಿದರು.