ಭಾಗಮಂಡಲ, ಏ. 3: ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ ಭಾಗಮಂಡಲದಲ್ಲಿ ಕಳೆದ 39 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎರ್ಮೆಕಾಲು ಕೆ. ಅಯ್ಯಪ್ಪ ಅವರನ್ನು ಸಂಘದ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್, ಉಪಾಧ್ಯಕ್ಷ ಕೆದಂಬಾಡಿ ಮೋಹನ್, ಕಾರ್ಯದರ್ಶಿ ನಿಡ್ಯಮಲೆ ಅಶೋಕ್, ಸಂಘದ ಸದಸ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.