ಮಡಿಕೇರಿ, ಏ.4: ಮತದಾರರಲ್ಲಿ ಜಾಗೃತಿ ಮೂಡಿಸುವ ದಿಸೆಯಲ್ಲಿ ತಾ. 7 ರಂದು ಬೆಳಿಗ್ಗೆ 9 ಗಂಟೆಗೆ ಮ್ಯಾರಥಾನ್ ಸ್ಫರ್ಧೆಯು ನಗರದ ಗಾಂಧಿ ಮೈದಾನದಿಂದ ಆರಂಭಗೊಳ್ಳಲಿದೆ.
19 ರಿಂದ 40 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು:-ಗಾಂಧಿ ಮೈದಾನ-ರಾಜಾಸೀಟ್-ಎಲ್.ಐ.ಸಿ.-ಎಫ್.ಎಂ.ಕೆ.ಎಂ.ಸಿ ಕಾಲೇಜು ಮಾರ್ಗ: ಮಡಿಕೇರಿ ಗ್ರಾಮಾಂತರ ಠಾಣೆ ಜಂಕ್ಷನ್ ನಿಂದ ಎಫ್.ಎಂ.ಕೆ.ಎಂ.ಸಿ ಕಾಲೇಜು ಹಿಂಭಾಗದ ಮಾರ್ಗವಾಗಿ ಬಂದು ಎಫ್.ಎಂ.ಕೆ.ಎಂ.ಸಿ ಕಾಲೇಜುವರೆಗೆ.
41 ರಿಂದ 60 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು:-ಗಾಂಧಿ ಮೈದಾನ-ರಾಜಾಸೀಟು-ಎಲ್.ಐ.ಸಿ. - ಎಫ್.ಎಂ.ಕೆ.ಎಂ.ಸಿ ಕಾಲೇಜು ಮಾರ್ಗ: ಮಡಿಕೇರಿ ಗ್ರಾಮಾಂತರ ಠಾಣೆ ಜಂಕ್ಷನ್ ನಿಂದ ಎಫ್.ಎಂ.ಕೆ.ಎಂ.ಸಿ ಕಾಲೇಜುವರೆಗೆ 60 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು:-ಗಾಂಧಿ ಮೈದಾನ- ರಾಜಾ ಸೀಟ್-ಎಲ್.ಐ.ಸಿ-ಹೊಸ ಖಾಸಗಿ ಬಸ್ಸು ನಿಲ್ದಾಣದ ಮೂಲಕ ಮ್ಯಾರಥಾನ್ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ಅವರು ತಿಳಿಸಿದ್ದಾರೆ.