ಮಡಿಕೇರಿ, ಏ.4: ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ತಾ. 22 ರಂದು ಜಿಲ್ಲೆಯ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು. ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ, ವೈವಾಹಿಕ ಕುಟುಂಬ ನ್ಯಾಯಾಲಯ ಹಾಗೂ ಇತರ ಸಿವಿಲ್ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳ ಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ತಿಳಿಸಿದೆ. ತಾ. 14 ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಅಂಬೇಡ್ಕರ್ ದಿನಾಚರಣೆ ಹಿನ್ನೆಲೆ 22 ಕ್ಕೆ ಮುಂದೂಡಲಾಗಿದೆ.