ಮಡಿಕೇರಿ, ಏ. 7: ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ವತಿಯಿಂದ ವಿಧಾನಸಭಾ ಚುನಾವಣೆ ಸಂಬಂಧ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ‘ಮಿಂಚಿನ ನೋಂದಣಿ ಅಭಿಯಾನವು ತಾ.8 ರಂದು ಬೆಳಿಗ್ಗೆ 10 ಗಂಟೆಗೆಯಿಂದ ಸಂಜೆ 5 ಗಂಟೆ ವರೆಗೆ ಬೂತ್ ಮಟ್ಟದಲ್ಲಿ ನಡೆಯಲಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.