ಒಡೆಯನಪುರ, ಏ. 8: ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಹಾಸನದ ಸಂತ ಫಿಲೋಮಿನಾ ಕಾಲೇಜಿನ ಉಪನ್ಯಾಸಕಿ ಪದ್ಮಾವತಿ ಹೇಳಿದರು.

ಕೊಡ್ಲಿಪೇಟೆ ಹಲಸಿನ ಮರ ಗೌರಮ್ಮ ಶಾಂತ ಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಕೊಡುವಷ್ಟೆ ಮಹತ್ವವನ್ನು ಜೀವನದ ಮೌಲ್ಯಗಳಿಗೂ ಕೊಡಬೇಕು ಎಂದರು. ವಿದ್ಯಾಸಂಸ್ಥೆ ಗೌರವಾಧ್ಯಕ್ಷ ಎಸ್.ಎಸ್. ನಾಗರಾಜ್ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವದನ್ನು ಗುರಿಯನ್ನಾಗಿ ಮಾಡಿಕೊಳ್ಳಬೇಕು ಎಂದರು. ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಮಾತನಾಡಿ, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಎಸ್. ಪರಮೇಶ್, ಉಪಾಧ್ಯಕ್ಷ ಸಿ.ವಿ. ಶಂಭುಲಿಂಗಪ್ಪ, ಖಜಾಂಚಿ ಡಾ. ಸಿ.ಆರ್. ಉದಯ್ ಕುಮಾರ್, ನಿರ್ದೇಶಕ ಬಿ.ಕೆ. ಯತೀಶ್ ಮುಂತಾದವರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.