ಮಡಿಕೇರಿ, ಏ. 9: ಕೊಡಗು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ವತಿಯಿಂದ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಅಥವಾ ಸರ್ಕಾರಿ ಅಧಿಕಾರಿಗಳಿಂದ ಲಂಚ ಬೇಡಿಕೆ ಹಾಗೂ ಕಿರುಕುಳ, ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸುವ ಸಲುವಾಗಿ, ತಾ. 13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಹಾಗೂ ತಾ. 16 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಕುಂದುಕೊರತೆ ಅರ್ಜಿ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜೆಂಕ್ಷನ್, ಮಡಿಕೇರಿ ದೂ; 08272-222100, 9480806282 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧೀಕ್ಷಕರು ತಿಳಿಸಿದ್ದಾರೆ.