ಮಡಿಕೇರಿ, ಏ. 9: ಮಡಿಕೇರಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದ ಯಾವದೇ ದೂರುಗಳನ್ನು ಸಲ್ಲಿಸಲು ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಅವರ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 08272-225400 ಸಂಪರ್ಕಿಸಬಹುದಾಗಿದೆ ಎಂದು ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರಮೇಶ್ ಕೊನರೆಡ್ಡಿ ತಿಳಿಸಿದ್ದಾರೆ.