ಮೂರ್ನಾಡು, ಏ. 10: ಮೂರ್ನಾಡು ವಿದ್ಯಾಸಂಸ್ಥೆಯ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡೆ ಮತ್ತು ಆಟೋಟ ಅಕಾಡೆಮಿ ವತಿಯಿಂದ ಬೇಸಿಗೆ ಕ್ರೀಡಾ ಶಿಬಿರಕ್ಕೆ ಚಾಲನೆ ನೀಡಲಾಯಿತು.
ವಿದ್ಯಾಸಂಸ್ಥೆ ಆಟದ ಮೈದಾನದಲ್ಲಿ 15 ದಿನಗಳ ಕಾಲ ಆಯೋಜಿಸಲಾಗಿರುವ ಹಾಕಿ ಮತ್ತು ಕ್ರಿಕೆಟ್ ತರಬೇತಿ ಶಿಬಿರವನ್ನು ಕ್ರೀಡಾ ಅಕಾಡೆಮಿ ನಿರ್ದೇಶಕ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಉದ್ಘಾಟಿಸಿದರು.
ಬಳಿಕ ಕ್ರೀಡೆಗಳಿಗೆ ಉತ್ತೇಜನ ಹಾಗೂ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಉದ್ದೇಶವನ್ನಿಟ್ಟುಕೊಂಡು ಕ್ರೀಡಾ ಅಕಾಡೆಮಿ ಸ್ಥಾಪನೆ ಮಾಡಲಾಗಿದೆ ಎಂದರು. ತರಬೇತುದಾರರಾದ ಅವರೆಮಾದಂಡ ಜಿ. ಗಣೇಶ್, ಅವರೆಮಾದಂಡ ಪಚ್ಚು ಕುಶಾಲಪ್ಪ, ಮಂಜುನಾಥ್, ಕಂಬೀರಂಡ ಬೋಪಣ್ಣ, ಪ್ರೌಢಶಾಲಾ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ, ಪ್ರದೀಪ್, ನಾಗೇಶ್ ಇನ್ನಿತರರು ಹಾಜರಿದ್ದರು.