ಶನಿವಾರಸಂತೆ, ಏ. 11: ವಿಧಾನ ಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಕೊಡ್ಲಿಪೇಟೆ ಪೊಲೀಸ್ ಉಪಠಾಣಾ ವ್ಯಾಪ್ತಿಯಲ್ಲಿ ಬಂದೂಕು ಹೊಂದಿರುವವರು ತಮ್ಮ ಬಂದೂಕುಗಳನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸುವಂತೆ ಡಿವೈಎಸ್ಪಿ ಶ್ರೀನಿವಾಸಮೂರ್ತಿ ಅವರ ನಿರ್ದೇಶನದಂತೆ ಎಸ್.ಐ. ಎನ್. ಆನಂದ್ ಅವರು ಸೂಚನೆ ನೀಡಿದ್ದಾರೆ.
ಈಗಾಗಲೇ ಬಹುತೇಕ ಮಂದಿ ಬಂದೂಕುಗಳನ್ನು ತಂದು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಜಮಾ ಮಾಡಿದ್ದಾರೆ. ಈವರೆಗೆ ನೀಡದವರು ಬಂದೂಕುಗಳನ್ನು ಶೀಫ್ರ ಜಮೆ ಮಾಡುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸುವದಾಗಿ ಎಚ್ಚರಿಸಿದ್ದಾರೆ.